ʼಹಾತ್ ಸೆ ಹಾತ್ ಜೋಡೋ ಅಭಿಯಾನ್’ ದ ಲಾಂಛನ ಬಿಡುಗಡೆ

Advertisement

ನವದೆಹಲಿ: ಭಾರತ್ ಜೋಡೋ ಯಾತ್ರೆಯ ನಂತರ ‘ಹಾತ್ ಸೆ ಹಾತ್ ಜೋಡೋ ಅಭಿಯಾನ’ ದ ಲಾಂಛನವನ್ನು ಕಾಂಗ್ರೆಸ್ ಪಕ್ಷ ಶನಿವಾರ ಬಿಡುಗಡೆ ಮಾಡಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೈ ನಾಯಕರು ಇದೇ 26ರಿಂದ 2 ತಿಂಗಳು ಹಾತ್ ಸೆ ಹಾತ್ ಜೋಡೋ ಅಭಿಯಾನ ನಡೆಯಲಿದೆ ಎಂದಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ಬಗ್ಗೆ ಮನೆಮನೆಗೆ ಸಂದೇಶ ಸಾರಲು ಈ ಅಭಿಯಾನ ನಡೆಸಲಾಗುತ್ತಿದೆ ಎಂದರು.