ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಅದ್ದೂರಿ ಚಾಲನೆ

Advertisement

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಕೀರ್ಣದಲ್ಲಿ ಭಾರತ್ ಸೌಟ್ಸ್ ಮತ್ತು ಗೈಡ್ಸ್ ವತಿಯಿಂದ ಡಿ.21ರಿಂದ 27ರ ವರೆಗೆ ಹಮ್ಮಿಕೊಂಡಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸಂಸದರಾದ ಡಾ. ವೀರೇಂದ್ರ ಹೆಗ್ಡೆ ಅವರು ಬುಧವಾರ ಸಂಜೆ ವನಜಾಕ್ಷಿ ಶ್ರೀಪತಿ ಭಟ್ ವೇದಿಕೆಯಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಉಮಾನಾಥ ಕೋಟ್ಯಾನ್, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಮುಖ್ಯ ಆಯುಕ್ತ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಸೇರಿದಂತೆ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್‌ನ ರಾಷ್ಟ್ರಮಟ್ಟದ ಪದಾಧಿಕಾರಿಗಳಿದ್ದರು.