ಅಥಣಿ: ಟಿಕೆಟ್ ನಿರಾಕರಿಸಿದ್ದರಿಂದ ಬಿಜೆಪಿಗೆ ಸೆಡ್ಡು ಹೊಡೆದು ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಅಥಣಿ ಪಟ್ಟದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು.
ಪಟ್ಟಣಕ್ಕೆ ಬಂದ ಸವದಿಯವರಿಗೆ ಹೂಮಾಲೆ ಹಾಕಿ, ಜಯಘೋಷಣೆ ಮೊಳಗಿಸಿ ಸಿಡಿಮದ್ದುಗಳನ್ನು ಸಿಡಿಸಿ ಅಭಿಮಾನಿಗಳು ಅದ್ದೂರಿಯಾಗಿ ಬರಮಾಡಿಕೊಂಡರು.
ಬಳಿಕ ತೆರೆದ ವಾಹನದಲ್ಲಿ ಹಳ್ಯಾಳ ರಸ್ತೆಯಿಂದ ಮೆರವಣಿಗೆ ಹೊರಟು ಶಿವಯೋಗಿ ವೃತ್ತ ಹಾಗೂ ಅಂಬೇಡ್ಕರ್ ವೃತದವರೆಗೆ ಸಾಗಿ ಅಂಬೇಡ್ಕರ್ ವೃತ್ತಕ್ಕೆ ಮಾಲಾರ್ಪಣೆ ಮಾಡಿದರು. ಅಥಣಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸಿದ್ಧಾರ್ಥ ಶಿಂಗೆ ಹೂಮಾಲೆ ಹಾಕಿ ಸ್ವಾಗತಿಸಿಕೊಂಡರು. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಹೂ ಮಳೆಗರೆದು ಅದ್ದೂರಿ ಸ್ವಾಗತ ಕೋರಿದರು.