ಅಪಘಾತ: ನಾಲ್ವರು ಸ್ಥಳದಲ್ಲಿಯೇ ಸಾವು

ಅಪಘಾತ
Advertisement

ದಕ್ಷಿಣ ಕನ್ನಡ: ಕಾರು-ಕ್ರೂಸರ್‌ ಮಧ್ಯೆ ಅಪಘಾತ ಸಂಭವಿಸಿ ಮಗು ಸೇರಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಡಬ ತಾಲೂಕಿನ ನೆಟ್ಟಣ ಬಳಿ ಜರುಗಿದೆ.
ಕಾರು ಬೇಲೂರಿನಿಂದ ಸುಬ್ರಹ್ಮಣ್ಯ ಕಡೆಗೆ ಪ್ರಯಾಣಿಸುತ್ತಿತ್ತು. ಎದುರಿನಿಂದ ಬರುತ್ತಿದ್ದ ಕ್ರೂಸರ್‌ ವಾಹನಕ್ಕೆ ಡಿಕ್ಕಿಯಾಗಿದೆ. ಆದರೆ ಕಾರಿನಲ್ಲಿದ್ದ ಮಗು, ಓರ್ವ ಮಹಿಳೆ ಮತ್ತು ಇಬ್ಬರು ಪುರುಷರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕ್ರೂಸರ್‌ನಲ್ಲಿದ್ದವರಿಗೆ ಗಾಯಗಳಾಗಿದ್ದು ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ.