ಅಪ್ರಾಪ್ತೆಗೆ ಲೈಂಗಿಕ ಕಿರುಕುಳ-ಆರೋಪಿ ಸೆರೆ

CHILD
Advertisement

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಪೋಕ್ಸೋ ಪ್ರಕರಣದಡಿ ಬಂಧಿಸಿದ್ದಾರೆ.
ಕಾವು ಮಾಲಡ್ಕ ನಿವಾಸಿ ತಕಿಯುದ್ದೀನ್ ಬಂಧಿತ ಆರೋಪಿ. ಸಂತ್ರಸ್ತ ಬಾಲಕಿಯ ತಂದೆಯ ಸ್ನೇಹಿತನಾಗಿದ್ದ ಆರೋಪಿ ತಕಿಯುದ್ದೀನ್, ಬಾಲಕಿಯ ಮನೆಗೆ ಬಂದು ಹೋಗುತ್ತಿರುವುದಲ್ಲದೆ ಸಲುಗೆಯಿಂದ ಇದ್ದ. ಕಳೆದ ಅಕ್ಟೋಬರ್ ತಿಂಗಳಲ್ಲಿ ಬಾಲಕಿ ಶಾಲೆಗೆ ಹೋಗುವ ಸಂದರ್ಭದಲ್ಲಿ ಹಿಂಬಾಲಿಸಿಕೊಂಡು ಬಂದು ಪ್ರತ್ಯೇಕವಾಗಿ ಮಾತನಾಡಲು ಪ್ರಯತ್ನಿಸುತ್ತಿದ್ದ. ಅ. 5 ರಂದು ರಾತ್ರಿ 12 ಗಂಟೆಗೆ ತಕಿಯುದ್ದೀನ್ ಸಂತ್ರಸ್ತೆಯ ಮನೆಯ ಬಾಗಿಲು ತಟ್ಟಿದ್ದಾನೆ ಎಂದು ದೂರಲಾಗಿದೆ.
ನ. 10 ರಂದು ಬೆಳಗ್ಗೆ ಬಾಲಕಿ ಶಾಲೆಗೆಂದು ಮನೆಯಿಂದ ಬಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕೆಯನ್ನು ಬಲವಂತವಾಗಿ ಬೈಕ್‌ನಲ್ಲಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವುದಾಗಿ ಬಾಲಕಿ ಡಿ. 22 ರಂದು ಮಹಿಳಾ ಠಾಣೆಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.