ಅಮುಲ್ ಉತ್ಪನ್ನ ಖರೀದಿಸುವುದಿಲ್ಲ ಎಂದು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಿ

ಸಿದ್ದರಾಮಯ್ಯ
Advertisement

ಅಮುಲ್ ಉತ್ಪನ್ನ ಖರೀದಿಸುವುದಿಲ್ಲ ಎಂದು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.
ಐಸ್ ಕ್ರೀಮ್ ಸೇರಿದಂತೆ ಹಲವು ಉತ್ಪನ್ನಗಳನ್ನು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಅಮುಲ್, ಶೀಘ್ರದಲ್ಲಿಯೇ ಕ್ಲಿಕ್ ಕಾರ್ಮಸ್ ಪ್ಲಾಟ್ ಫಾರ್ಮ್ ಮೂಲಕ ಮನೆಗಳಿಗೆ ತಲುಪಿಸಲು ಹೊರಟಿದೆ. ಈ ಕುರಿತು ʼಅಮುಲ್‌ ಕನ್ನಡʼ ತನ್ನ ಅಧಿಕೃತ ಟ್ವಿಟರ್‌ ಅಕೌಂಟ್‌ನಲ್ಲಿ ಹೇಳಿಕೊಂಡಿದೆ.
ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದು, ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್‌ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕು ಎಂದು ಕರೆ ನೀಡಿದ್ದಾರೆ. ಭಾಷಾದ್ರೋಹ ಮತ್ತು ನೆಲದ್ರೋಹದ ಜೊತೆಗೆ ಈಗ ಕೆಎಂಎಫ್ ಅನ್ನು ಮುಚ್ಚಿಸುವ ಮೂಲಕ ರೈತದ್ರೋಹ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಹೊರಟಿದೆ ಎಂದು ಅವರು ಕಿಡಿಕಾರಿದ್ದಾರೆ.