ಅಮೆರಿಕದ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ ನಗರದಲ್ಲಿನ ಮಾಂಟೆರಿ ಪಾರ್ಕ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, 9ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಚಾಂದ್ರಮಾನ ಪದ್ಧತಿಯಂತೆ ಆರಂಭವಾಗುವ ಹೊಸ ವರ್ಷವನ್ನು ಸಂಭ್ರಮಿಸಲು ಚೈನೀಸ್ ನ್ಯೂ ಇಯರ್ ಪಾರ್ಟಿ ಆಯೋಜಿಸಲಾಗಿತ್ತು. ಈ ವೇಳೆ ಸುಮಾರು 50,000ಕ್ಕೂ ಹೆಚ್ಚು ಜನರು ಸೇರಿದ್ದರು. ಇದನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಗಾಯಾಳು ಮತ್ತು ಮೃತರ ನಿಖರ ಮಾಹಿತಿ ತಿಳಿದುಬರಬೇಕಿದೆ.