ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಗುರುವಾರ ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಬಳಿ ಪತನಗೊಂಡಿದೆ. ಬೆಳಗ್ಗೆ ಹೆಲಿಕಾಪ್ಟರ್ ಏರ್ ಟ್ರಾಫಿಕ್ ಕಂಟ್ರೋಲ್ ಸಂಪರ್ಕ ಕಳೆದುಕೊಂಡಿದೆ ಎಂದು ವರದಿಯಾಗಿದೆ.
ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಕಾರ್ಯಾಚರಣೆ ನಡೆಸುತ್ತಿದ್ದ ಸೇನಾ ಹೆಲಿಕಾಪ್ಟರ್ ಗುರುವಾರ ಪತನಗೊಂಡಿದೆ. ಬೊಮ್ಡಿಲಾ ಪಶ್ಚಿಮದ ಮಂಡಲ ಬಳಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭವಾಗಿದೆ.