ಅಲ್ಪಸಂಖ್ಯಾತ ಮತದಾರರ ಡಿಲೀಟ್ ಎಂಬುದು ಸುಳ್ಳು: ಸಿಎಂ ಬೊಮ್ಮಾಯಿ

CM
Advertisement

ಹುಬ್ಬಳ್ಳಿ : ರಾಜ್ಯಾದ್ಯಂತ ಅನಧಿಕೃ ಸಮೀಕ್ಷೆಗಳು ನಡೆದು ಅಲ್ಪಸಂಖ್ಯಾತರ ಮತದಾರರನ್ನು ಡಿಲೀಟ್ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶುಕ್ರವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯ ಚುನಾವಣೆ ಆಯೋಗ ಈ ಬಗ್ಗೆ ಗಮನ ಹರಿಸಿದೆ. ಚುನಾವಣಾ ಆಯೋಗದ ನೇತೃತ್ವದಲ್ಲಿ ಮತದಾರರನ್ನು ಪಟ್ಟಿ ಪರಿಷ್ಕರಣೆಯಾಗುತ್ತದೆ. ಈ ಕುರಿತು ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗ ಕಾಳಜಿ ವಹಿಸಿದೆ. ಈ ರೀತಿಯ ದೂರುಗಳು ಬಂದಲ್ಲಿ ಅಧಿಕಾರಿಗಳಿಂದ ತನಿಖೆ ಮಾಡಿಸಬೇಕು ಎಂದು ರಾಜ್ಯ ಸರ್ಕಾರ ಕೋರಿದೆ ಎಂದರು.
ಕೆಲವು ಕಡೆದ ಅನಧಿಕೃತವಾಗಿ ಮತದಾರರನ್ನು ಸೇರಿಸುವ ಕೆಲಸವೂ ಆಗಿದೆ. ಎರಡು ಕಡೆಗಳಲ್ಲಿ ಮತದಾರರ ಚೀಟಿ ಹೊಂದಿರುವವರೂ ಇದ್ದಾರೆ. ಅಂಥವನ್ನು ತೆಗೆಯುವ ಕೆಲಸ ಆಯೋಗ ಮಾಡಬೇಕು. ಯಾವುದೇ ಕಾರಣಕ್ಕೂ ಅಧಿಕೃತ ಜನರಿಗೆ ಮತದಾನದ ಹಕ್ಕು ಇರಲೇಬೇಕು. ಅದನ್ನು ಮೇಲ್ವಿಚಾರಣೆ ಮಾಡುವ ಕೆಲಸ ಚುನಾವಣಾ ಆಯೋಗ ಮಾಡಬೇಕು ಎಂದರು.