ಆಂಧ್ರ ರಾಜ್ಯಪಾಲರಾಗಿ ಕನ್ನಡಿಗ ಅಬ್ದುಲ್ ನಜೀರ್

Advertisement

ನವದೆಹಲಿ: ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್‌. ಅಬ್ದುಲ್‌ ನಜೀರ್‌ ಅವರನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ನೇಮಕ ಮಾಡಿದ್ದಾರೆ. ಆಂಧ್ರ ಮಾತ್ರವಲ್ಲದೆ ಛತ್ತಿಸ್‌ಗಢ, ಬಿಹಾರ, ಮಣಿಪುರ ಸೇರಿದಂತೆ ವಿವಿಧ ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ಎಸ್.ಅಬ್ದುಲ್ ನಜೀರ್ ಅವರು ದಕ್ಷಿಣ ಕನ್ನಡದ ಬೆಳುವಾಯಿ ಮೂಲದವರು. ಇವರ ನೇಮಕಕ್ಕೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿನಂದನೆ ಸಲ್ಲಿಸಿ ಟ್ವೀಟ್‌ ಮಾಡಿದ್ದಾರೆ. “ನೂತನವಾಗಿ ಆಂದ್ರ ಪ್ರದೇಶದ ರಾಜ್ಯಪಾಲರಾಗಿ ನಿಯುಕ್ತಿಗೊಂಡಿರುವ ಹೆಮ್ಮೆಯ ಕನ್ನಡಿಗ ಶ್ರೀ ಎಸ್‌. ಅಬ್ದುಲ್ ನಜೀರ್ ರವರಿಗೆ ಹಾರ್ದಿಕ ಅಭಿನಂದನೆಗಳು. ಮೂಲತಃ ಮಂಗಳೂರಿನ ಬೆಳುವಾಯಿಯವರಾದ ಇವರು ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿ, ನಂತರ ಸುಪ್ರಿಂ ಕೋರ್ಟ್ ನಲ್ಲಿ ನ್ಯಾಯಾಧೀಶರಾಗಿ, ನಿವೃತ್ತರಾಗಿದ್ದರು” ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ.