ಮಂಗಳೂರು: ಇಲ್ಲಿನ ಮರೋಳಿಯಲ್ಲಿರುವ ತಮ್ಮ ನಿವಾಸದಲ್ಲಿ ದಂಪತಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಮೃತರನ್ನು ಬೆಳಗಾವಿ ಮೂಲದ ಮಲ್ಲಿಕಾರ್ಜುನ ಬಸವರಾಜ ಕೊಪ್ಪದ್(34) ಮತ್ತು ಮಂಗಳೂರಿನ ಸೌಮ್ಯ ನಾಯಕ್(35) ಎಂದು ಗುರುತಿಸಲಾಗಿದೆ.
ಒಂದೂವರೆ ವರ್ಷದ ಹಿಂದೆ ಇಬ್ಬರೂ ಮದುವೆಯಾಗಿದ್ದರು ಎಂದು ತಿಳಿದುಬಂದಿದೆ. ಮರೋಳಿಯ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.