ಬೆಂಗಳೂರು: ನಂದಿ ಬೆಟ್ಟದ ಬಳಿ ಇಶಾ ಫೌಂಡೇಷನ್ ಸ್ಥಾಪಿಸಿರುವ ಆದಿಯೋಗಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.
ಜ. 15ರಂದು ಸಂಕ್ರಾಂತಿಯಂದು ನಿಗದಿಯಾದ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದಾರೆ. ಪಿಐಎಲ್ ದಾಖಲಿಸುವ ಮುನ್ನವೇ ಈ ಕಾರ್ಯಕ್ರಮ ನಿಗದಿಯಾಗಿದೆ. ಹೀಗಾಗಿ ಕಾರ್ಯಕ್ರಮ ಆಯೋಜನೆಗೆ ಅನುಮತಿ ನೀಡಬೇಕು ಎಂದು ಇಶಾ ಫೌಂಡೇಶನ್ ಮನವಿ ಮಾಡಿತ್ತು.