ಆಧುನಿಕ ಭಗೀರಥ ಎಂದೇ ಖ್ಯಾತಿಗಳಿಸಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ಜಲಋಷಿ ಕಾಮೇಗೌಡರು ಅನಾರೋಗ್ಯದಿಂದ ಇಂದು ನಿಧನರಾದರು. ಜಲ ಸಂರಕ್ಷಣೆ ಕಾರ್ಯದಲ್ಲಿ ತೊಡಗಿಕೊಂಡು ಸುಮಾರು 15ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿದ್ದ ಅವರು, ಅಂತರ್ಜಲ ಹೆಚ್ಚಳಕ್ಕೆ ಕಾರಣರಾಗಿದ್ದರು. ಮಾತ್ರವಲ್ಲ ಗಿಡಗಳನ್ನು ನೆಟ್ಟು ಪರಿಸರ ಕಾಳಜಿ ಮೆರೆದಿದ್ದರು.