ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರಕಾರ ಮುಂದಾಗಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ ಆರೋಗ್ಯ ಸಚಿವ ಸುಧಾಕರ, 400 ಫಾರ್ಮಸಿ ಅಧಿಕಾರಿಗಳು ಹಾಗೂ 150 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.