ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಗರಸೇವಕನ ಬಂಧನ

ಬಂಧನ
Advertisement

ಬೆಳಗಾವಿ: ಹಲ್ಲೆಗೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಗರಸೇವಕ ಅಭಿಜಿತ ಜವಳಕರ ಅವರನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.
ಕಳೆದ ಎರಡು ದಿನದ ಹಿಂದೆ ಅಕ್ರಮ ಮೊಬೈಲ್ ಟಾವರ್ ಕೂಡಿಸುವುದಕ್ಕೆ ಅಭಿಜಿತ್ ಜವಳಕರ ಆಕ್ಷೇಪ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಅವರ ಮೇಲೆ ಅಲ್ಲಿನ ನಿವಾಸಿ ರಮೇಶ ಪಾಟೀಲ ಸೇರಿದಂತೆ ಹತ್ತು ಜನರ ಗುಂಪು ತೀವ್ರ ಸ್ವರೂಪದ ಹಲ್ಲೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಅವರು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು.
ಇಂದು ಮಧ್ಯಾಹ್ನ ಎಂಇಎಸ್‌ನವರು ಪ್ರತಿಭಟನೆ ನಡೆಸಿದ ನಂತರ ಪೊಲೀಸರು ಆಸ್ಪತ್ರೆಗೆ ತೆರಳಿ ಜವಳಕರ ಅವರನ್ನು ಬಂಧಿಸಿದರು. ಗಮನಿಸಬೇಕಾದ ಸಂಗತಿ ಎಂದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ವೈದ್ಯರಿಂದ ಡಿಸ್ಚಾರ್ಜ್‌ ಮಾಡಿಸದೇ ಅವರನ್ನು ಕರೆದುಕೊಂಡು ಹೋಗಿದ್ದು ಈಗ ಹೊಸ ವಿವಾದಕ್ಕೆ ಕಾರಣವಾಗುತ್ತಿದೆ.