ಇದು ಆರಂಭ ಅಷ್ಟೇ: WPL​ ಗೀತೆ ಬಿಡುಗಡೆ

Advertisement

ಮಹಿಳಾ ಪ್ರೀಮಿಯರ್ ಲೀಗ್ ಅಧಿಕೃತ ಗೀತೆಯನ್ನು ಬಿಡುಗಡೆ ಮಾಡಿದೆ. ಈ ಗೀತೆಯನ್ನು Women’s Premier League ನ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಗಾಯಕ ಶಂಕರ್ ಮಹಾದೇವನ್, ನೀತಿ ಮೋಹನ್ ಮತ್ತು ಹರ್ದೀಪ್ ಕೌರ್ ಅವರು ‘ಯೇ ತೋ ಬಾಸ್ ಶುರುವಾತಿ ಹೈ’ ಗೀತೆಗೆ ಧ್ವನಿ ನೀಡಿದ್ದಾರೆ. ಎರಡು ನಿಮಿಷಗಳ ಈ ವಿಡಿಯೋದಲ್ಲಿ ದೀಪ್ತಿ ಶರ್ಮಾ, ಶೆಫಾಲಿ ವರ್ಮಾ ಸೇರಿದಂತೆ ಹಲವು ಕ್ರಿಕೆಟಿಗರು ಕಾಣಿಸಿಕೊಂಡಿದ್ದಾರೆ. ಮಹಿಳಾ ಕ್ರಿಕೆಟ್ ಬೆಳವಣಿಗೆಯನ್ನು ಗೀತೆಯಲ್ಲಿ ಚಿತ್ರಿಸಲಾಗಿದೆ.