ಇದೇ ವರ್ಷದಿಂದ ಭಗವದ್ಗೀತೆ ಬೋಧನೆ: ಸಚಿವ ನಾಗೇಶ್

ಬಿ.ಸಿ. ನಾಗೇಶ್
Advertisement

ಇದೇ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್​ ತಿಳಿಸಿದರು. ಭಗವದ್ಗೀತೆ ಬೋಧಿಸಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ? ಎಂದು ವಿಧಾನ ಪರಿಷತ್​ನಲ್ಲಿ ಸದಸ್ಯ ಎಂ.ಕೆ. ಪ್ರಾಣೇಶ್​ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದೇ ವರ್ಷದಿಂದಲೇ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆದಿದೆ ಎಂದರು.