ಕುಷ್ಟಗಿ:ತಾಲೂಕಿನ ಚಿಕ್ಕ ನಂದಿಹಾಳ ಗ್ರಾಮದ ಹೊನ್ನಮ್ಮದೇವಿ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಂಗಳವಾರ ಬೆಳಗಿನ ಜಾವ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದ ಜನರ ವಿರುದ್ಧ ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಅವರ ಮಾರ್ಗದರ್ಶನದಂತೆ ಪಿಎಸ್ಐ ಮೌನೇಶ್ ರಾಠೋಡ್ ಹಾಗೂ ಪೊಲೀಸ್ ಸಿಬ್ಬಂದಿ ದಿಢೀರ್ ದಾಳಿ ಮಾಡಿ 17 ಜನ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪಿಎಸ್ಐ ಮೌನೇಶ್ ರಾಠೋಡ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಂದರ್ಭದಲ್ಲಿ 17 ಜನ ಆರೋಪಿಗಳು ಅಂದರ ಬಾಹರ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದು ದಾಳಿ ನಡೆಸಿದ ಸಂದರ್ಭದಲ್ಲಿ ಪೊಲೀಸರನ್ನು ಕಂಡು ಕೂಡಲೇ ಆರೋಪಿಗಳು ದಿಗ್ಭ್ರಮೆಗೊಂಡು ಓಡಲು ಮುಂದಾಗುತ್ತಿದ್ದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.