ಅಮರಾವತಿ: ಆಂಧ್ರಪ್ರದೇಶದ ಪಾರ್ವತಿಪುರಂ ಜಿಲ್ಲೆಯ ಮೋಟಾರು ಶೋ ರೂಂನಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 36 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಮುಂಜಾನೆ ಪಾಲಕೊಂಡ ಪಟ್ಟಣದ ಮನಂ ಮೋಟಾರ್ಸ್‌ನಲ್ಲಿ ಈ ಘಟನೆ ನಡೆದಿದೆ. ಇ-ಬೈಕ್‌ಗಳು ಮತ್ತು ಬ್ಯಾಟರಿಗಳನ್ನು ದೀಪಾವಳಿ ಪ್ರಯುಕ್ತ ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ಶೋರೂಂನಲ್ಲಿ ಇರಿಸಲಾಗಿತ್ತು, ಇ-ಬೈಕ್‌ಗಳು ಮತ್ತು ಬ್ಯಾಟರಿಗಳು ಬೆಂಕಿಗೆ ಆಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.