ಈಶ್ವರಪ್ಪ ಯಾರು…?

Advertisement

ಗದಗ: ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಧುರೀಣ ಕೆ.ಎಸ್. ಈಶ್ವರಪ್ಪ ಸಿದ್ದರಾಮಯ್ಯ ಕಳ್ಳರ ಗ್ಯಾಂಗ್ ಹೇಳಿಕೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದ್ದು, ಈ ರೀತಿ ಅಸಂಬದ್ಧ ಹೇಳಿಕೆ ನೀಡಲು ಈಶ್ವರಪ್ಪ ಯಾರು? ಎಂದು ಪ್ರಶ್ನಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ಕೆ.ಎಸ್. ಈಶ್ವರಪ್ಪ ಉಪ ಮುಖ್ಯಮಂತ್ರಿಯಾಗಿದ್ದವರು. ಉಪಮುಖ್ಯಮಂತ್ರಿ ಸ್ಥಾನದಲ್ಲಿದ್ದು ಹಲವಾರು ತೀರ್ಮಾನ ತೆಗೆದುಕೊಂಡಿರ್ತಾರೆ. ನಂತರ ವಿರೋಧ ಪಕ್ಷದವರು ಈ ರೀತಿ ಹೇಳಿಕೆ ನೀಡುವದು ಸರಿಯೇ ಎಂದು ಪ್ರಶ್ನಿಸಿದರು.
ಚುನಾವಣೆ ಸಂದರ್ಭದಲ್ಲಿ ವಿರೋಧ ಪಕ್ಷದವರ ಈ ರೀತಿಯ ಹೇಳಿಕೆ ಸ್ವಾಭಾವಿಕ… ರಾಜ್ಯದಲ್ಲಿ ಮಳೆ ವಿಫಲತೆಯಿಂದ ಭೀಕರ ಬರಗಾಲ ತಾಂಡವಾಡುತ್ತಿದೆ. ಕೇಂದ್ರ ಸರಕಾರಕ್ಕೆ ಬರ ಪರಿಹಾರ ನಿಧಿ ನೀಡುವಂತೆ ಕೋರಿ ಪತ್ರ ಬರೆಯಲಾಗಿದೆ. ಕೇಂದ್ರ ಸರಕಾರ ಇದುವರೆಗೂ ಚಿಕ್ಕಾಸು ಬಿಡುಗಡೆ ಮಾಡಿಲ್ಲ. ಬಿಜೆಪಿ ನಾಯಕರು ಬರಗಾಲದ ಅನುದಾನ ನೀಡದ ಕೇಂದ್ರ ಸರಕಾರದ ವಿರುದ್ಧ ಧ್ವನಿ ಎತ್ತಲಿ ಎಂದು ಸಲಹೆ ನೀಡಿದರು.
ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯನವರನ್ನು ಇಳಿಸುವ ವಿಷಯ ಮಾತನಾಡಿದ್ದ ವಿರೋಧ ಪಕ್ಷದ ನಾಯಕ ಆರ್. ಅಶೋಕಗೆ ಬಿಜೆಪಿಯಲ್ಲಿ ಮೂರು ಸಿಎಂಗಳನ್ನು ಇಳಿಸಿದ್ರಲ್ಲ. ಅದಕ್ಕ ಅಶೋಕ ಉಸ್ತುವಾರಿ ವಹಿಸಿದ್ದರೆ ಎಂದು ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದರು.