ಬೆಂಗಳೂರು: ಉತ್ತಮ ಪ್ರಜಾಕೀಯ ಪಕ್ಷದಿಂದ ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳಿಗೆ ಆಟೋ ರಿಕ್ಷಾವನ್ನು ಸಾಮಾನ್ಯ ಚಿಹ್ನೆ ಎಂದು ಚುನಾವಣಾ ಆಯೋಗ ನಿಗದಿಪಡಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಉಪೇಂದ್ರ, ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ “ಆಟೋ ರಿಕ್ಷಾ “ ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ಹೇಳಿದ್ದಾರೆ. 2018ರಲ್ಲಿ ತಮ್ಮ ಜನ್ಮದಿನ ಅಂದರೆ ಸೆಪ್ಟೆಂಬರ್ 18ರಂದು ಉಪೇಂದ್ರ ಅವರು ಉತ್ತಮ ಪ್ರಜಾಕೀಯ ಪಕ್ಷ ಎಂಬ ಹೊಸ ಪಕ್ಷವನ್ನು ಅಧಿಕೃತವಾಗಿ ಘೋಷಿಸಿದ್ದರು.