ಉಭಯ ರಾಜ್ಯಗಳ ಬಾಂಧವ್ಯ ವೃದ್ಧಿಗೆ ಸಮನ್ವಯ ಸಭೆ ಸಹಕಾರಿ

ರಾಜ್ಯಪಾಲರು
Advertisement

ಬೆಳಗಾವಿ: ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಸ್ಥಳೀಯ ಆಡಳಿತದಲ್ಲಿ ಅತ್ಯುತ್ತಮ ಸಮನ್ವಯತೆ ಕಾಪಾಡಿಕೊಳ್ಳುತ್ತಿರುವ ಅಧಿಕಾರಿಗಳ ಬಗ್ಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಹಾಗೂ ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಮೆಚ್ಚುಗೆ ವ್ಯಕ್ತಪಡಿಸಿದರು.
ಮಹಾರಾಷ್ಟ್ರದ ಕೊಲ್ಲಾಪುರದ ರೆಸಿಡೆನ್ಸಿ ಕ್ಲಬ್‌ನಲ್ಲಿ ಶುಕ್ರವಾರ ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳ ಗಡಿಭಾಗದ ಜಿಲ್ಲೆಗಳ ಅಂತರರಾಜ್ಯ ಸಾಮಾನ್ಯ ಸಮಸ್ಯೆಗಳ ಕುರಿತು ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಪಾಲರ ಸಮ್ಮುಖದಲ್ಲಿ ಎರಡು ರಾಜ್ಯಗಳ ಸಮನ್ವಯ ಸಭೆಯಲ್ಲಿ ಪಾಲ್ಗೊಂಡು. ಈ ಎರಡು ನೆರೆ ರಾಜ್ಯಗಳ ನಡುವೆ ಉತ್ತಮ ಬಾಂಧವ್ಯವಿದ್ದು, ಇದನ್ನು ಇನ್ನಷ್ಟು ವೃದ್ಧಿಸಿಕೊಳ್ಳುವ ನಿಟ್ಟಿನಲ್ಲಿ ಈ ಸಭೆಯನ್ನು ಕರೆಯಲಾಗಿದೆ ಎಂದವರು ಹೇಳಿದರು.
ಕೊಲ್ಹಾಪುರ, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳ ಗಡಿ ಭಾಗದ ಎಲ್ಲ ಜಿಲ್ಲೆಗಳಲ್ಲಿ ಸ್ಥಳೀಯ ಆಡಳಿತದ ಅತ್ಯುತ್ತಮ ಸಮನ್ವಯವಿದ್ದು, ಅದನ್ನು ಹೆಚ್ಚಿಸಲು ಪ್ರಯತ್ನಿಸಬೇಕು ಎಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಮತ್ತು ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಸಲಹೆಗಳನ್ನು ನೀಡಿದರು. ಉಭಯ ರಾಜ್ಯಗಳ ಅಧಿಕಾರಿಗಳ ಚರ್ಚೆಯ ಮೂಲಕ ರಾಜ್ಯ ಮಟ್ಟದಲ್ಲಿ ಬಗೆಹರಿಸಬೇಕಾದ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ತಿಳಿಸಲಾಗುವುದು ಎಂದು ಹೇಳುವ ಮೂಲಕ ಸಮನ್ವಯ ಸಭೆಯು ಭವಿಷ್ಯದಲ್ಲಿ ಖಂಡಿತವಾಗಿಯೂ ಪ್ರಯೋಜನಕಾರಿಯಾಗಲಿದೆ ಎಂದು ಅವರು ಸೂಚಿಸಿದರು.
ಸಾಮಾನ್ಯ ಸಮಸ್ಯೆಗೆ ಸಂಬಂಧಿಸಿದಂತೆ ಇಂದಿನ ಸಮನ್ವಯ ಸಭೆಯಲ್ಲಿ ಚರ್ಚೆಯ ವಿವರಗಳನ್ನು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ರಾಜ್ಯಪಾಲ ಭವನಕ್ಕೆ ಕಳುಹಿಸಬೇಕು. ಇದನ್ನು ಪರಿಶೀಲಿಸಿದ ಬಳಿಕ ರಾಜ್ಯ ಮಟ್ಟದ ವಿಷಯದ ಬಗೆಗೆ ಎರಡೂ ರಾಜ್ಯ ಸರ್ಕಾರಗಳಿಗೆ ರಾಜ್ಯಪಾಲರ ಭವನದಿಂದ ಸೂಚನೆ ನೀಡಲಾಗುವುದು ಎಂದು ಉಭಯ ರಾಜ್ಯಪಾಲರು ತಿಳಿಸಿದರು.