ಉಮೇಶ್​ ಕತ್ತಿ ನಿಧನಕ್ಕೆ ಶೋಕಾಚರಣೆ ಅಂತಾರೆ.. ಬಿಜೆಪಿ ನಾಯಕರು ಡಾನ್ಸ್​​ ಮಾಡ್ತಾರೆ

Advertisement

ಹುಬ್ಬಳ್ಳಿ: ಬಿಜೆಪಿಯವರು ಲಂಚ ಪಡೆದ ಹಣದಲ್ಲಿ ಜನ ಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಬಂದು ಸಾಕಷ್ಟು ಸಮಸ್ಯೆ ಆಗಿದೆ. ಸುಮಾರು 7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಬೆಂಗಳೂರಿನಲ್ಲೂ ಸಹ ಮಳೆಯಿಂದಾಗಿ ಸಮಸ್ಯೆಯಾಗಿದೆ. ಬಿಜೆಪಿ ನಾಯಕರು ಸಂಕಷ್ಟದಲ್ಲಿರುವ ಜನರಿಗೆ ಸ್ಪಂದನೆ ಮಾಡುವುದು ಬಿಟ್ಟು, ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.