ಉರಿಗೌಡ-ನಂಜೇಗೌಡ ಬಗ್ಗೆ ಚರ್ಚೆಯಾಗಲಿ: ಕಟೀಲು

ಕಟೀಲ್
Advertisement

ದಾವಣಗೆರೆ: ಉರಿಗೌಡ-ನಂಜೇಗೌಡ ಬಗ್ಗೆ ಚರ್ಚೆಯಾಗಲಿ, ಇತಿಹಾಸ ಪುರುಷರ, ವೀರ ಪುರುಷರ ಬಗ್ಗೆ ಸೂಕ್ತ ಚರ್ಚೆಯಾಗಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಮುಖಂಡ ರಾಹುಲ್ ಗಾಂಧಿ ಎಲ್ಲೆಲ್ಲಿ ಹೋಗುತ್ತಾರೋ ಅಲ್ಲೆಲ್ಲಾ ಕಾಂಗ್ರೆಸ್ ಸೋಲು ಕಂಡಿದೆ. ಕೈಮುಗಿದು ಕೇಳುತ್ತೇನೆ. ರಾಹುಲ್ ಗಾಂಧಿ ರಾಜ್ಯದ ೨೨೪ ಕ್ಷೇತ್ರಗಳಲ್ಲೂ ಪ್ರವಾಸ ಕೈಗೊಳ್ಳಲಿ, ರಾಹುಲ್ ಹೋದಲ್ಲೆಲ್ಲಾ ಕಾಂಗ್ರೆಸ್ ಸೋಲಲಿದ್ದು, ಎಲ್ಲಾ ಕ್ಷೇತ್ರಕ್ಕೂ ರಾಹುಲ್ ಭೇಟಿ ನೀಡಲಿ ಎಂದು ಅವರು ವ್ಯಂಗ್ಯವಾಡಿದರು.