ಸೋಮವಾರ ನಡೆದ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಇಂದು(ಬುಧವಾರ) ಪ್ರಕಟವಾಗಿದ್ದು, ಅವರು ತಮ್ಮ ಎದುರಾಳಿ ಶಶಿ ತರೂರ್ ಅವರನ್ನು ಸೋಲಿಸಿದ್ದಾರೆ.
ಸುಮಾರು 9,000 ಮತ ಚಲಾವಣೆಗೊಂಡಿದ್ದು, ಮಲ್ಲಿಕಾರ್ಜುನ ಖರ್ಗೆ 7,897 ಮತ ಪಡೆದು ಜಯಭೇರಿ ಬಾರಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಸುದೀರ್ಘ ರಾಜಕೀಯ ಅನುಭವ, ಅಧ್ಯಯನ, ಜ್ಞಾನ, ಬದ್ಧತೆಗಳು ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ಹಾಗೂ ರಾಜಕೀಯವಾಗಿ ಇನ್ನಷ್ಟು ಗಟ್ಟಿಯಾಗಿ ಕಟ್ಟುವಲ್ಲಿ ಸಹಕಾರಿಯಾಗಲಿದೆ ಎನ್ನಲಾಗಿದೆ. ಅವರ ಎದುರಾಳಿ ಶಶಿ ತರೂರ್ ಅವರು ಸುಮಾರು 1,000 ಮತ ಗಳಿಸಿದ್ದಾರೆ. 416 ಮತ ತಿರಸ್ಕೃತವಾಗಿವೆ.