ಎಲ್ಲರ ಬಣ್ಣ ಬಯಲು ಮಾಡುತ್ತೇನೆ

BSY
Advertisement

ಬೆಂಗಳೂರು: ನಾನು ಇನ್ನೂ ಗಟ್ಟಿ ಇದ್ದೇನೆ. ರಾಜ್ಯದ ಉದ್ದಗಲಕ್ಕೂ ಹೋಗಿ ಇವೆರೆಲ್ಲರ ಬಣ್ಣ ಬಯಲು ಮಾಡುತ್ತೇನೆ. ಮೋದಿ ಶಾ ನೇತೃತ್ವವನ್ನು ಪಡೆದು ರಾಜ್ಯದಲ್ಲಿ ಜಯ ಗಳಿಸಲಿದ್ದೇವೆ. ಯಾವುದೇ ಶಕ್ತಿ ನಮ್ಮನ್ನು ತಡೆಯಲು ಸಾಧ್ಯವಿಲ್ಲ, ಪಕ್ಷ ಬಿಟ್ಟವರ ಬಂಡವಾಳ ಬಯಲು ಮಾಡುತ್ತೇನೆ ಎಂದು ಬಿ ಎಸ್‌ ಯಡಿಯೂರಪ್ಪ ಹೇಳಿದ್ದಾರೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೆ ಬಿಎಸ್‌ ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯನ್ನು ಮಾಡಿದರು. ಭಾರತೀಯ ಜನತಾ ಪಕ್ಷ ಒಂದು ರಾಷ್ಟ್ರೀಯ ಪಕ್ಷವಾಗಿದೆ. ಹಳೇ ಬೇರು, ಹೊಸ ಚಿಗುರು ಸೇರಿ ಪಕ್ಷ ಬಲಪಡಿಸಬೇಕಾಗಿದೆ. ನನಗೆ, ಜಗದೀಶ್​ ಶೆಟ್ಟರ್ ಅವರಿ​ಗೆ, ಲಕ್ಷ್ಮಣ ಸವದಿ ಅವರಿಗೆ ಪಕ್ಷ ಹಲವು ಅವಕಾಶ ನೀಡಿದೆ. ಲಕ್ಷ್ಮಣ ಸವದಿಯವರನ್ನು ಬಿಜೆಪಿಗೆ ಕರೆತಂದು ಶಾಸಕ, ಸಚಿವ ಮಾಡಿದ್ದೇವು. 2018ರ ವಿಧಾನಸಭಾ ಚುನಾವಣೆಯಲ್ಲಿ ಲಕ್ಷ್ಮಣ ಸವದಿ ಅವರು ಸೋತಿದ್ದರು. ಸೋತಿದ್ದ ಲಕ್ಷ್ಮಣ ಸವದಿಯನ್ನು ಡಿಸಿಎಂ ಮಾಡಿದ್ದೆವು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಜಗದೀಶ್​ ಶೆಟ್ಟರ್ ಅವರು ಜನಸಂಘದ ಕಾಲದಿಂದಲೂ ​ಬಿಜೆಪಿಯಲ್ಲಿದ್ದರು. ಜಗದೀಶ್​ ಶೆಟ್ಟರ್​ರನ್ನು ಶಾಸಕ, ಮಂತ್ರಿ, ಸಿಎಂ ಮಾಡಿದ್ದೆವು. ಜಗದೀಶ್​ ಶೆಟ್ಟರ್ ಅವರಿ​ಗೆ ನಾನು, ಅನಂತಕುಮಾರ್​ ಕಾವಲಾಗಿದ್ದೆವು. ನನ್ನ ಜತೆ ಹೆಜ್ಜೆ ಹಾಕುವ ಜವಾಬ್ದಾರಿ ಜಗದೀಶ್ ಶೆಟ್ಟರ್​ಗೆ ಇತ್ತು. ಶೆಟ್ಟರ್ ರಾಜೀನಾಮೆ ಕೊಟ್ಟಿದ್ದು ಸರಿಯಲ್ಲ. ಶೆಟ್ಟರ್ ಏನು ಅನ್ಯಾಯ ಆಗಿತ್ತು? ಪಕ್ಷ ಹಲವಾರು ಅವಕಾಶಗಳನ್ನು ನೀಡಿದೆ. ಮೋದಿ ಜೊತೆಗೆ ಹೆಜ್ಜೆ ಹಾಕುವುದು ನಮ್ಮ ಉದ್ದೇಶ’ ಎಂದು ಯಡಿಯೂರಪ್ಪ ಹೇಳಿದ್ದಾರೆ. ನಿಮಗೆ ಅಧಿಕಾರ ಕೊಡಲ್ಲ ಎಂದು ಶೆಟ್ಟರ್​ಗೆ ಹೇಳಿದ್ದೀವಾ? ನಿಮ್ಮನ್ನು ರಾಜ್ಯಸಭೆಗೆ ಕಳುಹಿಸುತ್ತೇವೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದರು. ಕೇಂದ್ರಕ್ಕೆ ಬನ್ನಿ ಮಂತ್ರಿ ಮಾಡುತ್ತೇವೆ ಎಂದು ಪ್ರಧಾನ್ ಹೇಳಿದ್ದರು. ಆದರೆ ಜಗದೀಶ್ ಶೆಟ್ಟರ್​ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ವೀರಶೈವ ಲಿಂಗಾಯತ ಸಮುದಾಯಕ್ಕೆ ಪಕ್ಷ ಸ್ಥಾನಮಾನ ನೀಡಿದೆ. ರಾಜ್ಯಾದ್ಯಂತ ಸುತ್ತಾಡಿ ಇವರ ಬಂಡವಾಳ ಬಯಲು ಮಾಡುತ್ತೇನೆ. ನಾನು ಇನ್ನೂ ಗಟ್ಟಿ ಇದ್ದೇನೆ. ರಾಜ್ಯದ ಉದ್ದಗಲಕ್ಕೂ ಹೋಗಿ ಇವೆರೆಲ್ಲರ ಬಣ್ಣ ಬಯಲು ಮಾಡುತ್ತೇನೆ. ಮೋದಿ ಶಾ ನೇತೃತ್ವವನ್ನು ಪಡೆದು ರಾಜ್ಯದಲ್ಲಿ ಜಯ ಗಳಿಸಲಿದ್ದೇವೆ. ಯಾವುದೇ ಶಕ್ತಿ ನಮ್ಮನ್ನು ತಡೆಯಲು ಸಾಧ್ಯವಿಲ್ಲ, ಪಕ್ಷ ಬಿಟ್ಟವರ ಬಂಡವಾಳ ಬಯಲು ಮಾಡುತ್ತೇನೆ ಎಂದು ಅವರು ಹೇಳಿದರು. ಒಂದು ವೇಳೆ ಅವರಿಗೆ ತಪ್ಪು ಅರಿವಾಗಿ ಪಕ್ಷಕ್ಕೆ ಮರಳಿದರೆ ಸ್ವಾಗತ. ನಾನೇ ಮುಂದೆ ನಿಂತು ಶೆಟ್ಟರ್, ಸವದಿಯನ್ನು ಸ್ವಾಗತ ಮಾಡುವೆ. ಪಕ್ಷದಲ್ಲಿ ಅವರಿಗೆ ಸ್ಥಾನಮಾನ ನೀಡುವುದು ನಮ್ಮ ಜವಾಬ್ದಾರಿ ಎಂದು ಬಿಎಸ್​ ಯಡಿಯೂರಪ್ಪ ಹೇಳಿದರು.