ಮೈಸೂರು: 224 ಕ್ಷೇತ್ರದಲ್ಲಿ ಎಲ್ಲಿ ಬೇಕಾದರೂ ಚುನಾವಣೆಗೆ ಸ್ಪರ್ಧಿಸುವವನೇ ನಿಜವಾದ ನಾಯಕ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮನ್ನು ಟೀಕೆ ಮಾಡುವವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸುವ ಅವಕಾಶವಿದೆ. ಜನ ಬಯಸಿದ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ. ಕೋಲಾರದವರು ಬಯಸಿದರೆ ಕೋಲಾರದಲ್ಲಿ, ವರುಣದವರು ಬಯಸಿದರೆ ವರುಣದಲ್ಲಿ ಸ್ಪರ್ಧಿಸುತ್ತೇನೆ ಎಂದರು.