ಎಲ್ಲ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ ಸುಧಾಕರ್ ಅವರು ತಿಳಿಸಿದರು.
ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯ ಜಬ್ಬಾರ್ ಸಾಬ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೆಲ ಜಿಲ್ಲೆಯಲ್ಲಿ ಆರಂಭಿಸಲಾಗಿದೆ. ಕೆಲವೆಡೆ ನಿರ್ಮಾಣ ಕಾಮಗಾರಿ ನಡೆದಿದೆ. ಹಣಕಾಸು ಲಭ್ಯತೆಯನುಸಾರ ಎಲ್ಲ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುತ್ತದೆ ಎಂದರು. ಇನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 24X7 ಸೇವೆ ಲಭ್ಯವಾಗುವಂತೆ ಕ್ರಮಕೈಗೊಳ್ಳಲಾಗುತ್ತಿದ್ದು, ಅಗತ್ಯ ಸಿಬ್ಬಂದಿ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದರು.