ಎಸಿಬಿ ರದ್ದು ಮಾಡಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ವಿಧಾನಸೌಧ
Advertisement

ಭ್ರಷ್ಟಾಚಾರ ನಿಗ್ರಹ ದಳ ರದ್ದುಗೊಳಿಸಿ(ಎಸಿಬಿ) ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಆಗಸ್ಟ್‌ 11ರಂದು ಎಸಿಬಿ ರದ್ದುಗೊಳಿಸುವಂತೆ ಹೈಕೋರ್ಟ್ ನೀಡಿದ ಆದೇಶದನ್ವಯ ರಾಜ್ಯ ಸರ್ಕಾರ ಎಸಿಬಿ ರದ್ದು ಮಾಡಿದೆ. ಇದರಿಂದ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಪ್ರಸ್ತುತ ಬಾಕಿಯಿರುವ ತನಿಖೆಗಳು/ವಿಚಾರಣೆಗಳು/ಇತರ ಶಿಸ್ತು ಪ್ರಕರಣಗಳು ಹಾಗೂ ಖಾಸಗಿ ದೂರುದಾರರ ಪ್ರಕರಣಗಳನ್ನು ಸಂಪೂರ್ಣವಾಗಿ ಲೋಕಾಯುಕ್ತ ಸಂಸ್ಥೆಗೆ ವರ್ಗಾಯಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.