ಬೆಂಗಳೂರು: ವಿವಿಧ ಸಮುದಾಯಗಳು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿಸುವಂತೆ ಒತ್ತಾಯ ಮಾಡುತ್ತಿದ್ದು, ಈ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದ ತಜ್ಞರು ನೀಡುವ ಶಿಫಾರಸ್ಸುಗಳನ್ನು ಪರಿಶೀಲಿಸಿ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಎಲ್ಲರಿಗೂ ಆಕಾಂಕ್ಷೆಗಳು ಇದ್ದೆ ಇರುತ್ತದೆ. ಸರ್ಕಾರ ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿ ಕಾನೂನಾತ್ಮಕವಾಗಿ ರಕ್ಷಣೆ ಕೊಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಹಿಂದುಳಿದ ವರ್ಗಗಳ ಆಯೋಗದ ತಜ್ಞರೊಡನೆ ಸಮಾಲೋಚಿಸಲಾಗುವುದು ಎಂದರು.