ಬೆಂಗಳೂರು: ಎಸ್.ಸಿ ಪಟ್ಟಿಯಿಂದ ಕೈಬಿಡುವುದಾಗಿ ಕಾಂಗ್ರೆಸ್ ರಾಜಕೀಯ ಪ್ರೇರಿತ ಕುತಂತ್ರ ಮಾಡಿದ್ದು ಯಾರನ್ನೂ ತೆಗೆಯುವ ಪ್ರಶ್ನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್.ಸಿ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಸಮುದಾಯಗಳಿಗೆ ಕಾಂಗ್ರೆಸ್‌ನವರು ಸುಳ್ಳು ಮಾಹಿತಿ ಕೊಡುತ್ತಿದ್ದಾರೆ. ಬಂಜಾರ, ಭೋವಿ, ಕೊರಚ ಯಾರನ್ನೂ ಕೂಡ ಪಟ್ಟಿಯಿಂದ ತೆಗೆಯಲಾಗುವುದಿಲ್ಲ. ಈ ಬಗ್ಗೆ ಫೆಬ್ರವರಿ ಮಾಹೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ. ಇವರೆಲ್ಲಾ ಮಹಾರಾಜರ ಕಾಲದಿಂದಲೂ ಇರುವಂಥ ಸಮುದಾಯಗಳು. ಸಂವಿಧಾನ ಆದ ನಂತರ ಇದ್ದ ಆರು ಸಮುದಾಯಗಳಲ್ಲಿ ಇವೂ ಇದ್ದು, ಇದನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಆಧಾರ ಸಮೇತವಾಗಿ ನೀಡಲಾಗಿದೆ