ಬೆಂಗಳೂರು: ಫೆಬ್ರವರಿ 13 ರಿಂದ 17 ರವರೆಗೆ ಏರ್ ಶೋ ನಡೆಯಲಿದ್ದು, ಏರ್ ಶೋ ವೀಕ್ಷಿಸಲು ಹೆಚ್ಚಿನ ಜನರ ದಂಡು ಕಿಕ್ಕಿರಿದು ಬರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್ ಬಿಡಲು ಬಿಎಂಟಿಸಿ ನಿರ್ಧರಿಸಿದೆ. ಸಾರ್ವಜನಿಕ ವೈಮಾನಿಕ ಪ್ರದರ್ಶನವು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ನಡೆಯಲಿದ್ದು, ದಿನಾಂಕ 16 ಹಾಗೂ 17ರಂದು ಜನರ ಅನೂಕೂಲಕ್ಕಾಗಿ ನಗರದ ವಿವಿಧ ಭಾಗಗಳಿಂದ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.