ಓಲೇಕಾರ ರಾಜೀನಾಮೆಗೆ ನಿರ್ಧಾರ

ಓಲೇಕಾರ
Advertisement

ಹಾವೇರಿ: ಶಾಸಕ ನೆಹರೂ ಓಲೇಕಾರ ದಿ.೧೬ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಬೆಳಗ್ಗೆ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ. ಬಳಿಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿ ಜೆಡಿಎಸ್ ಸೇರುವ ಸಾಧ್ಯತೆ ಇದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಹಾವೇರಿ ನಗರಕ್ಕೆ ಬಿಜೆಪಿ ಟೆಕೆಟ್ ತಪ್ಪಿದ ನಂತರ ಓಲೇಕಾರ ತೀವ್ರ ಅಸಮಾಧಾನಗೊಂಡಿದ್ದರು. ಸಿಎಂ ವಿರುದ್ಧ ಮುನಿಸಿಕೊಂಡು ವಾಗ್ದಾಳಿ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.