ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ ನೆಹರು ಓಲೇಕಾರ ವಿರುದ್ಧ ವೀರಶೈವ ಮಹಾಸಭಾ ಹಾಗೂ ಬೊಮ್ಮಾಯಿ ಅಭಿಮಾನಿಗಳಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಹಾವೇರಿಯ ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆಯಲ್ಲಿ ಓಲೇಕಾರ ಸಿಎಂ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ವೀರಶೈವ ಮಹಾಸಭಾ ಸದಸ್ಯರು, ಕಾಂಗ್ರೆಸ್, ಬಿಜೆಪಿ ಮುಖಂಡರು, ಬೊಮ್ಮಾಯಿ ಅಭಿಮಾನಿಗಳು ನಗರದ ಪುರ ಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ರ್ಯಾಲಿ ಆರಂಭಿಸಿದರು. ಎಂಜಿ ವೃತ್ತದ ಮೂಲಕ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ತೆರಳಿ ಪ್ರತಿಭಟಿಸಿದರು. ಓಲೇಕಾರ ವಿರುದ್ಧ ಘೋಷಣೆ ಕೂಗಿದರು.