ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರೌಡಿ ಚಟುವಟಿಕೆ ಮಾಡುವವರ ಮೇಲೆ ನಿಗಾ ಇಡುವುದಕ್ಕಾಗಿ ಪೊಲೀಸರು ಪಟ್ಟಿ ತಯಾರಿಸಿದ್ದು ಅದರಲ್ಲಿ ಕನ್ನಡಪರ ಹೋರಾಟಗಾರ ಸಂಪತ್ ಮತ್ತು ಅನಿಲ್ ಹೆಸರು ಇರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ನೋಟಿಸ್ ಜಾರಿ ಮಾಡಿದ್ದಾರೆ. ಶಾಂತಿ ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಾಧ್ಯತೆ ಹಿನ್ನೆಲೆ 50 ಸಾವಿರ ರೂ. ಮೊತ್ತದ ಸ್ವಯಂ ಮುಚ್ಚಳಿಕೆ ನೀಡುವಂತೆ ಹಾಗೂ ಹಾಗೂ ಇಬ್ಬರೂ ಜಾಮೀನುದಾರರಿಂದ ಮುಚ್ಚಳಿಕೆ ಪಡೆಯುವಂತೆ ನೋಟಿಸ್ನಲ್ಲಿ ಸೂಚಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ #ನಾಡವಿರೋಧಿಸರ್ಕಾರ, #Antikannadagovt ಹ್ಯಾಷ್ ಟ್ಯಾಗ ಬಳಸಿ ಅಭಿಯಾನದಡಿ ಕನ್ನಡಿಗರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.