ಧಾರವಾಡ: ಕಬ್ಬು ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಮುಂದವರೆದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡಿದರೂ ಅವರ ಭೇಟಿ ಫಲಪ್ರದವಾಗಲಿಲ್ಲ.
ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದ ರೈತರು ಸಕ್ಕರೆ ಸಚಿವರು ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದು ಅಹೋರಾತ್ರಿ ಧರಣಿ ನಡೆಸಿದರು. ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಭೇಟಿ ನೀಡಿ ಸರಕಾರ ಸಭೆ ನಡೆಸಲಿದೆ. ರೈತರು ಪ್ರತಿಭಟನೆ ಹಿಂಪಡೆಯಬೇಕು ಎಂದು ಮನವಿ ಮಾಡಿದರು.
ಆದರೆ, ಇದಕ್ಕೆ ಜಗ್ಗದ ರೈತರು ಸಕ್ಕರೆ ಸಚಿವರು ಸ್ಥಳಕ್ಕೆ ಬರಬೇಕು. ರೈತರ ಬೇಡಿಕೆ ಈಡೇರಿಸಬೇಕು. ಅಲ್ಲಿಯ ವರೆಗೆ ನಿತ್ಯ ವಿನೂತನ ಪ್ರತಿಭಟನೆ ರೈತರು ಮಾಡಲಿದ್ದಾರೆ ಎಂದು ರಾಜ್ಯಾಧ್ಯಕ್ಷ ಕುರುಬೂರ ಶಾಂತಕುಮಾರ ತಿಳಿಸಿದರು.