ಸೌದಿ ಅರೇಬಿಯಾ ರಾಜಧಾನಿ ರಿಯಾದ್ ನ ಕಿಂಗ್ ಫಹದ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಸಂತೋಷ್ ಟ್ರೋಫಿ ರಾಷ್ಟ್ರೀಯ ಫುಟ್‌ಬಾಲ್ ಚಾಂಪಿಯನ್ ಶಿಪ್‌ನಲ್ಲಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ 3-2 ಗೋಲುಗಳಿಂದ ಮೇಘಾಲಯ ತಂಡವನ್ನು ಮಣಿಸಿದೆ. ಕರ್ನಾಟಕ ಏಕೀಕರಣದ ನಂತರ 54 ವರ್ಷಗಳ ಬಳಿಕ ರಾಜ್ಯಕ್ಕೆ ದೊರೆತ ಮೊದಲ ಪ್ರಶಸ್ತಿ ಇದಾಗಿದೆ.