ಕುಷ್ಟಗಿ: ನಮ್ಮ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳು ಚುನಾವಣೆಯಲ್ಲಿ ಯಶಸ್ವಿಯಾಗುವುದು ಬಹಳ ಕಡಿಮೆಯಾಗಿದೆ ಅದರಲ್ಲೂ ವಿಶೇಷವಾಗಿ ಬಳ್ಳಾರಿಯ ಮಾಜಿ ಶಾಸಕ ಜನಾರ್ಧನ್ ರೆಡ್ಡಿ ಅವರು “ಕಲ್ಯಾಣ ರಾಜ್ಯ ಪ್ರಗತಿ ಪಕ್ಷ” ಸ್ಥಾಪನೆ ಮಾಡಿದ್ದಾರೆ ಇದರಿಂದಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಮೇಲೆ ಬಹಳಷ್ಟು ಪರಿಣಾಮ ಬೀರದಿದ್ದರೂ ಸಹ ಸ್ವಲ್ಪಮಟ್ಟಿಗೆ ಪರಿಣಾಮ ಬೀರಬಹುದು ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಹೇಳಿದರು.
ತಾಲೂಕಿನ ತಾವರಗೇರಿ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು, ರಾಜ್ಯದ ವಿಷಯಕ್ಕೆ ಬಂದಾಗ ಮಾತ್ರ ಪ್ರಾದೇಶಿಕ ಪಕ್ಷಗಳು ಅಷ್ಟು ಕಷ್ಟ ಇವೆ, ರಾಜ್ಯದಲ್ಲಿರುವಂತಹ ಪ್ರಾದೇಶಿಕ ಪಕ್ಷಗಳು ಯಾವುದೇ ರೀತಿ ಯಶಸ್ವಿ ಪಡೆಯದೆ ಇರುವುದು ಕಂಡು ಬಂದಿದೆ. ಹಾಗಾಗಿ ಜನಾರ್ದನ್ ರೆಡ್ಡಿ ಅವರು ತಪಿಸುವ ಹೊಸ ಪ್ರಾದೇಶಿಕ ಪಕ್ಷದಿಂದ ಕ್ಷೇತ್ರಕ್ಕೆ ಅನುಗುಣವಾಗಿ ಸ್ಥಳೀಯ ಅಭ್ಯರ್ಥಿ ಹಾಗೂ ಕ್ಷೇತ್ರದ ಮತದಾರರ ಅಭಿಪ್ರಾಯದ ಮೂಲಕ ವಿಧಾನಸಭೆ ಚುನಾವಣೆ ನಡೆಯುತ್ತದೆ ಆದ್ದರಿಂದಾಗಿ “ಕಲ್ಯಾಣ ರಾಜ್ಯ ಪ್ರಗತಿ ಪಕ್ಷ” ಯಶಸ್ವಿ ಕಾಣಲು ಸಾಧ್ಯವಾಗುವುದಿಲ್ಲ ಎನ್ನುವ ಅನಿಸಿಕೆ ನನ್ನದಾಗಿದೆ ಎಂದರು