ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಸಾವನ್ನಪ್ಪಿರುವ ಘಟನೆ ಬುಧವಾರ ಜರುಗಿದೆ. ತೆಲಂಗಾಣದ ನಾರಾಯಣಪೇಟೆ ಖಾಸಗಿ ಆಸ್ಪತ್ರೆಯಲ್ಲಿ ಸಾವಿತ್ರಮ್ಮ (35) ಬುಧವಾರ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.
ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿ ನೀರು ಕಲುಷಿತವಾಗಿದೆ ಎಂದು ಗೊತ್ತಾಗಿದೆ. ಕಲುಷಿತ ನೀರು ಸೇವನೆಯಿಂದ ಗ್ರಾಮದಲ್ಲಿ ವಾಂತಿ ಬೇಧಿ ಉಲ್ಬಣವಾಗಿದೆ. 30 ಜನರಲ್ಲಿ ವಾಂತಿ ಬೇಧಿ ಕಾಣಿಸಿಕೊಂಡಿದ್ದು, ಫೆ. 14 ರಂದು 24 ಜನ, ಫೆ.15 ರಂದು 6 ಜನರಲ್ಲಿ ವಾಂತಿ ಬೇಧಿ ಕಾಣಿಸಿಕೊಂಡಿದೆ. ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ 15 ಜನ ದಾಖಲಾಗಿದ್ದು, ತೆಲಂಗಾಣದ ನಾರಾಯಣಪೇಟೆಯಲ್ಲಿ 3, ಉಳಿದವರಿಗೆ ಅನಪುರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ 13 ಮಂದಿ ಚಿಕಿತ್ಸೆ ಪಡೆಯುತ್ತಿದ್ದರೆ, ತೆಲಂಗಾಣದ ನಾರಾಯಣಪೇಟೆನಲ್ಲಿ 8, ಮೈಬೂಬನಗರದ ಖಾಸಗಿ ಆಸ್ಪತ್ರೆಗೆ 4 ವರ್ಷದ ಬಾಲಕ ದಾಖಲಾಗಿದ್ದಾನೆ. ಯಾದಗಿರಿ ಜಿಲ್ಲಾಸ್ಪತ್ರೆಗೆ ಜಿಲ್ಲಾ ಆರೋಗ್ಯ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 13 ಜನರ ಆರೋಗ್ಯ ಸ್ಥಿರವಾಗಿದೆ ಎಂದು ಡಿಹೆಚ್ಒ ಮಾಹಿತಿ ನೀಡಿದ್ದಾರೆ.