ಕಲ್ಯಾಣ ಕರ್ನಾಟಕ ವಿಮೋಚನೆಯ ಅಮೃತ ಮಹೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನಾಳೆ ಕಲಬುರಗಿ ಪ್ರವಾಸ ಮಾಡಲಿದ್ದಾರೆ. ನಾಳೆ ಬೆಳಗ್ಗೆ 7 ಗಂಟೆಗೆ ಹೆಚ್ ಎ ಎಲ್ ವಿಮಾನ ನಿಲ್ದಾಣದ ಮೂಲಕ ಕಲಬುರ್ಗಿಗೆ ಪ್ರಯಾಣಿಸಲಿದ್ದಾರೆ.
ಕಲಬುರ್ಗಿಯ ಕಲ್ಯಾಣ ಕರ್ನಾಟಕದ ವಿಮೋಚನೆಯ ರೂವಾರಿಯಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಲಿದ್ದಾರೆ. 11 ಗಂಟೆಗೆ ಪೋಲಿಸ್ ಆಯುಕ್ತಾಲಯದ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. 11.30 ಕ್ಕೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. 2 ಗಂಟೆಗೆ ಹೈದ್ರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯನ್ನು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಎಂದು ಮರುನಾಮಕರಣ ಮಾಡಲಿದ್ದಾರೆ. ಸಂಜೆ 4.30 ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.