ಹುಬ್ಬಳ್ಳಿ: ಉತ್ತರ ಕರ್ನಾಟಕ ಜನತೆಯ ಹಲವು ದಶಕಗಳ ಬಹು ನಿರೀಕ್ಷೆಯ ಯೋಜನೆಯಾಗಿರುವ ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿರುವುದು ಅತ್ಯಂತ ಸಂತಸದ ಸಂಗತಿಯಾಗಿದ್ದು, ಸ್ವಾಗತಾರ್ಹವಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದು ಅದಕ್ಕಾಗಿ ಕೇಂದ್ರ ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಉತ್ತರ ಕರ್ನಾಟಕದ ಜನತೆಯ ಜೀವನಾಡಿಯಾಗಿರುವ ಕಳಸಾ ಬಂಡೂರಿ ಯೋಜನೆ ಸಾಕಾರಕ್ಕೆ ಜಲ ಆಯೋಗ ಸೂಕ್ತವಾಗಿ ಸ್ಪಂದಿಸಿದ್ದು ಸಂತಸದ ವಿಷಯ. ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರ ವಿಶೇಷ ಕಾಳಜಿಯಿಂದ ಉತ್ತರ ಕರ್ನಾಟಕದ ಜನರ ಕುಡಿಯುವ ನೀರಿನ ಬವಣೆ ತಪ್ಪಿಸಲು ತೆಗೆದುಕೊಂಡಿರುವ ಈ ನಿರ್ಧಾರ ಶ್ಲಾಘನೀಯವಾಗಿದೆ ಎಂದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯದ ನೀರಾವರಿ ಸಚಿವ ಗೋವಿಂದ ಕಾರಜೋಳ, ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರ ದೂರದೃಷ್ಟಿ ಹಾಗೂ ಬದ್ಧತೆಯಿಂದ ಈ ಕ್ರಮ ಸಫಲವಾಗಿದೆ. ನಮ್ಮ ಭಾಗದ ಜನರ ಬಹು ವರ್ಷಗಳ ಕನಸು ನನಸಾಗುವ ಹಂತದಲ್ಲಿz.ೆ ಯೋಜನೆಗಾಗಿ ಸತತ ಹೋರಾಟ ಮಾಡಿದ ಕಳಸಾ ಬಂಡೂರಿ ಹೋರಾಟಗಾರರು, ರೈತರೂ ಸಹ ಅಭಿನಂದನಾರ್ಹರು ಎಂದು ಸಭಾಪತಿ ಶ್ರೀ ಬಸವರಾಜ ಹೊರಟ್ಟಿ ಹೇಳಿದ್ದಾರೆ..