ಕಾಂಗ್ರೆಸ್‌ಗೆ ಬಹುಮತ: ರಾಹುಲ್‌ ವಿಶ್ವಾಸ

ರಾಹುಲ್‌
Advertisement

ಕೋಲಾರ: ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಪೂರ್ಣ ಬಹುಮತಗಳೊಂದಿಗೆ ಅಧಿಕಾರಕ್ಕೆ ತರಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದರು.
ಕೋಲಾರದಲ್ಲಿ ನಡೆದ ಜೈ ಭಾರತ್ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದರು. ಮೀಸಲಾತಿ ಮತ್ತು ಅದಾನಿ ವಿಷಯವಾಗಿ ರಾಹುಲ್‌ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದ ಜನರಿಗೆ 4 ಗ್ಯಾರಂಟಿ ನೀಡಿದ್ದೇವೆ. ಉಚಿತ ವಿದ್ಯುತ್, ಗೃಹಲಕ್ಷ್ಮೀ ಯೋಜನೆ, ಅನ್ನಭಾಗ್ಯ ಹಾಗೂ ಯುವಕರಿಗೆ ಯುವನಿಧಿ ಯೋಜನೆ. ಇವುಗಳನ್ನು ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಈಡೇರಿಸುತ್ತದೆ. ಮೊದಲ ಕ್ಯಾಬಿನೆಟ್‌ನಲ್ಲಿಯೇ ಎಲ್ಲಾ ಭರವಸೆಗಳನ್ನು ಈಡೇರಿಸಲಾಗುವುದು ಎಂದರು. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.