ಕಾಂಗ್ರೆಸ್‌ನಿಂದ ಪ್ರತಿಭಟನೆ ಇಲ್ಲ

ಮುರ್ಮು
Advertisement

ಹುಬ್ಬಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಾನಗರಕ್ಕೆ ಆಗಮಿಸಿ ಪೌರ ಸನ್ಮಾನ ಸ್ವೀಕರಿಸುತ್ತಿರುವುದು ಹೆಮ್ಮೆಯ ವಿಷಯ. ಕಾರ್ಯಕ್ರಮ ವಿರೋಧಿಸಿ ಕಾಂಗ್ರೆಸ್ ಪಕ್ಷ ಯಾವುದೇ ಪ್ರತಿಭಟನೆ ಹಮ್ಮಿಕೊಂಡಿಲ್ಲ. ಸಾರ್ವಜನಿಕರು, ಅಧಿಕಾರಿಗಳು, ಜನಪ್ರತಿನಿಧಿಗಳು ಊಹಾ ಪೋಹಗಳಿಗೆ ಕಿವಿಗೊಡಬಾರದು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ ಹುಸೇನ ಹಳ್ಳೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರಪತಿಗಳ ಆಗಮಿಸುತ್ತಿರುವ ಇಂತಹ ಸಂದರ್ಭದಲ್ಲಿ ಯಾವುದೇ ಪ್ರತಿಭಟನೆಯ ಔಚಿತ್ಯವಿಲ್ಲ. ಆಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ತಿಳಿಸಿದ್ದಾರೆ.