ಕಾಂಗ್ರೆಸ್‌ನ 3ನೇ ಗ್ಯಾರಂಟಿ ಘೋಷಣೆ: 10 ಕೆಜಿ ಅಕ್ಕಿ

Advertisement

ಬೆಂಗಳೂರು : ಕಾಂಗ್ರೆಸ್ ಮೂರನೇ ಗ್ಯಾರಂಟಿ ಘೋಷಣೆ ಮಾಡಿದ್ದಾರೆ. ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ, ಎಂಬಿ ಪಾಟೀಲ್ ಸೇರಿದಂತೆ ಕೈ ಶಾಸಕರು ಈ ಮೂರನೇ ಗ್ಯಾರಂಟಿ ಯೋಜನೆಯನ್ನ ಘೋಷಣೆ ಮಾಡಿದ್ದಾರೆ. ಜನರ ಹಸಿವು ನೀಗಬೇಕು ಹಾಗಾಗಿ ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ BPL ಕಾರ್ಡ್‌ನಲ್ಲಿ ಇರುವವರಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಿದ್ದೇವೆ ಎಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.