ರಾಜಕೀಯಕ್ಕಾಗಿ ಆರ್‌ಎಸ್‌ಎಸ್ ಬ್ಯಾನ್ ಮಾಡಬೇಕು ಎನ್ನುತ್ತಿರುವ ಕಾಂಗ್ರೆಸ್‌ನ್ನೇ ಬ್ಯಾನ್ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ನಂತರ ಗಾಂಧಿ ಕಾಂಗ್ರೆಸ್ ವಿಸರ್ಜನೆ ಮಾಡಬೇಕೆಂದಿದ್ದರು. ಮೊದಲಿಗೆ ಮಹತ್ಮಾ ಗಾಂಧಿ ಹೇಳಿದ್ದು ನೀವು ಮಾಡಲಿಲ್ಲ. ಅಲ್ಲದೇ ದೇಶದಲ್ಲಿ ಭಯೋತ್ಪಾದನೆ, ನಕ್ಸಲ್ಗೂ ಕಾಂಗ್ರೆಸ್ ಬೆಂಗಾವಲಾಗಿ ನಿಂತಿದೆ. ಇದಕ್ಕೆ ನನ್ನ ಬಳಿ ಸಾಕ್ಷಿಗಳಿವೆ ಎಂದರು.