ಹುಬ್ಬಳ್ಳಿ: ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಪ್ತರಾಗಿದ್ದ ಮೋಹನ ಲಿಂಬಿಕಾಯಿ ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ವಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರಿದರು. ಮೋಹನ್ ಲಿಂಬಿಕಾಯಿ ಅವರಿಗೆ ಪಕ್ಷದ ಧ್ವಜ ನೀಡಿ ಸ್ವಾಗತಿಸಲಾಯಿತು.