ಕಾರವಾರ ರಸ್ತೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 18 ಲಕ್ಷ ರೂಪಾಯಿ ವಶ

ಹಣ
Advertisement

ಹುಬ್ಬಳ್ಳಿ: ಇಲ್ಲಿನ ಕಾರವಾರ ರಸ್ತೆಯಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ18 ಲಕ್ಷ ನಗದು ಹಣವನ್ನು ರವಿವಾರ ಹುಬ್ಬಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹಳೇಹುಬ್ಭಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ‌ ಕಾರವಾರ ರಸ್ತೆಯ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಜನರು ಅಂಕೋಲಾ ಕಡೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಬ್ರಿಜಾ ಕಾರನ್ನು ಪರಿಶೀಲಿಸಿದಾಗ ಸೂಕ್ತ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಸುಮಾರು 18 ಲಕ್ಷ ರೂಪಾಯಿ ಹಣವನ್ನು ಬೆಳಗ್ಗೆ 10.30 ಕ್ಕೆ ವಶಪಡಿಸಿಕೊಂಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ದಕ್ಷಿಣ ಉಪ ವಿಭಾಗದ ಎಸಿಪಿ ಆರ್. ಕೆ. ಪಾಟೀಲ್ ಹಾಗೂ ಹುಬ್ಬಳ್ಳಿ ನಗರ ತಹಶೀಲ್ದಾರ್ ಅವರು ಅಕ್ರಮವಾಗಿ ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕಾರು ಸಮೇತ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ವಿಚಾರಣೆ ಮಾಡುತ್ತಿದ್ದಾರೆ. ಹಣ ಸಾಗಿಸುತ್ತಿದ್ದವರು ಯಾರು ಯಾವ ಕಾರಣಕ್ಕೆ ಸಾಗಿಸುತ್ತಿದ್ದರು ಎಂಬುದು ವಿಚಾರಣೆ ಬಳಿಕ ಹೊರಬರಬೇಕಿದೆ.