ಬೆಳಗಾವಿ: ಉಪ ಸಭಾಪತಿ ಆನಂದ ಮಾಮನಿ ಅವರ ನಿಧನದಿಂದಾಗಿ ಕಿತ್ತೂರು ಉತ್ಸವ ಕಾರ್ಯಕ್ರಮ ಒಂದು ದಿನ ಅ. 24ಕ್ಕೆ ಒಂದು ದಿನ ಮುಂದೂಡಲಾಗಿದೆ ಎಂದು ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡ್ರ ತಿಳಿಸಿದ್ದಾರೆ.
ಚನ್ನಮ್ಮನ ಕಿತ್ತೂರಿನ ಚನ್ನಮ್ಮ ವೃತ್ತದ ಬಳಿ ಭಾನುವಾರ ಶಾಂತಿ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿತ್ತೂರು ಉತ್ಸವ ಕಾರ್ಯಕ್ರಮ ಮುಂದೂಡಿಕೆ ಬಗ್ಗೆ ಮಾಹಿತಿ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರವಿವಾರ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಬೇಕಿತ್ತು. ಆದರೆ ಮಾಮನಿ ಅವರ ಅಗಲಿಕೆಯಿಂದ ರಾಜ್ಯಾದ್ಯಂತ ಜನರು ಶೋಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ದಿನ ಉತ್ಸವ ಮುಂದೂಡಲಾಗಿದೆ ಎಂದರು.
ರಾಜ್ಯ ಸರ್ಕಾರ ಆಯೋಜಿಸಿದ್ದ ಕಿತ್ತೂರು ಉತ್ಸವದ ಕಾರ್ಯಕ್ರಮಗಳು ಸೋಮವಾರಕ್ಕೆ ಮುಂದೂಡಲಾಗಿದೆ. ಅ. 24ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದರು.