ಉಡುಪಿ: ಇಂದು ಕೃಷ್ಣ ಮಠಕ್ಕೆ ಭೇಟಿ ನೀಡಿ ನನ್ನ ಜೀವನ ಪಾವನವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.
ಜಿಲ್ಲೆಯಲ್ಲಿ ಆಯೋಜಿಸಿದ್ದ ಬಿಜೆಪಿ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿ, ತನ್ನ ವಿಚಾರಧಾರೆ ಮೂಲಕ ಮುನ್ನಡೆಯುತ್ತಿರುವ ಏಕೈಕ ಪಕ್ಷ ಬಿಜೆಪಿ. ದೇಶದಲ್ಲಿ ತನ್ನ ವಿಚಾರಧಾರೆಯಲ್ಲಿ ನಂಬಿಕೆ ಇಟ್ಟು ದಾಪುಗಾಲಿಡುತ್ತಿದೆ. ಇತರ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಗೆ ಮಾತ್ರ ವಿಚಾರಧಾರೆ ಇದೆ. ಮಾಸ್ ಪಾಲೋವರ್ಸ್ಗಳಿದ್ದಾರೆ ಎಂದು ಹೇಳಿದರು.