ಕೋಲಾರ: ಕೆಜಿಎಫ್ನಲ್ಲಿ ಇಂದು ಜೆಡಿಎಸ್ ಪಂಚರತ್ನ ಸಮಾವೇಶ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಸಿ.ಎಂ. ಇಬ್ರಾಹಿಂ ಸೇರಿದಂತೆ ಹಲವರು ಗಣ್ಯರು ಭಾಗಿಯಾಗುವ ಸಾಧ್ಯತೆಯಿದೆ.
ಕೋಲಾರದ ಮುಳಬಾಗಿಲಿನಿಂದ ಆರಂಭವಾಗಿದ್ದ ಯಾತ್ರೆ ಕೆಜಿಎಫ್ನಲ್ಲಿ ಸಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಕೆಜಿಎಫ್ ಮುನ್ಸಿಪಲ್ ಮೈದಾನದಲ್ಲಿ ಸಂಜೆ 4 ಗಂಟೆಗೆ ಬೃಹತ್ ಸಮಾವೇಶ ನಡೆಯಲಿದ್ದು, ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಘೋಷಣೆ ಮಾಡುವ ಸಾಧ್ಯತೆಯಿದೆ.